alex Certify ರೋಗ ನಿರೋಧಕ ಶಕ್ತಿ ಹೆಚ್ಚಳ: ಯೋಗ ದಿನದ ಅಂಗವಾಗಿ ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ನಿರೋಧಕ ಶಕ್ತಿ ಹೆಚ್ಚಳ: ಯೋಗ ದಿನದ ಅಂಗವಾಗಿ ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಸಂದೇಶ ನೀಡಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಗ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಯೋಗ ದಿನಾಚರಣೆ ಅಂಗವಾಗಿ ಇಂದು ‘ಯೋಗ @ ಹೋಮ್ ಯೋಗ ವಿತ್ ಫ್ಯಾಮಿಲಿ’ ಕುಟುಂಬದ ಜೊತೆ ಯೋಗ ಈ ವರ್ಷದ ಥೀಮ್ ಆಗಿದೆ.

ದೇಶದ ಜನತೆಗೆ ಸಂದೇಶ ನೀಡಿದ ಮೋದಿ, ಯೋಗ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಯೋಗದಿಂದ ಮಾನಸಿಕ ಶಾಂತಿ ಸಿಗುತ್ತದೆ. ಅಲ್ಲದೇ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ರೋಗನಿರೋಧಕ ಶಕ್ತಿ ಜಾಸ್ತಿಯಾದರೆ ಕೊರೋನಾ ನಿಯಂತ್ರಣಕ್ಕೆ ಬರುತ್ತದೆ. ಯೋಗ ನಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ದೈಹಿಕ ಶಕ್ತಿ ಮಾತ್ರವಲ್ಲ, ಮಾನಸಿಕ ಸಮತೋಲನ ಕಾಪಾಡುತ್ತದೆ. ಎಲ್ಲರೂ ಯೋಗ ಮಾಡಿ ಎಂದು ಸಲಹೆ ನೀಡಿದ್ದಾರೆ.

ಈ ಬಾರಿ ಕೊರೋನಾ ಕಾರಣದಿಂದ ಮನೆಯಲ್ಲೇ ಯೋಗ ಮಾಡಲು ಸಲಹೆ ನೀಡಲಾಗಿದ್ದು, ಅನೇಕ ಕಡೆ ಅಂತರ ಕಾಯ್ದುಕೊಂಡು ಯೋಗ ಮಾಡುವ ಮೂಲಕ ಯೋಗ ದಿನಾಚರಣೆ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...