alex Certify ಮರ್ಸಿಡಿಸ್​​ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಡೆಲಿವರಿ ಬಾಯ್​ ಸಾವು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರ್ಸಿಡಿಸ್​​ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಡೆಲಿವರಿ ಬಾಯ್​ ಸಾವು…!

ಮಹಾರಾಷ್ಟ್ರದ ಮುಂಬೈನ ಓಶಿವಾರ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಮರ್ಸಿಡಿಸ್​ ಕಾರು ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಜೊಮಾಟೋ ಡೆಲಿವರಿ ಬಾಯ್​ ಸಾವನ್ನಪ್ಪಿದ್ದಾನೆ. ಮೃತಪಟ್ಟ ಯುವಕನನ್ನ ಸತೀಶ್​ ಎಂದು ಗುರುತಿಸಲಾಗಿದೆ. ಮರ್ಸಿಡಿಸ್​ ಡಿಕ್ಕಿ ಹೊಡೆದ ರಭಸಕ್ಕೆ ಸತೀಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಚುರುಕುಗೊಳಿಸಿದ್ದಾರೆ. ಮರ್ಸಿಡಿಸ್​ ಚಾಲನೆ ಮಾಡುತ್ತಿದ್ದ 19 ವರ್ಷದ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ.

ಮರ್ಸಿಡಿಸ್​ ಚಾಲಕನ ಅಚಾತುರ್ಯದಿಂದ 20 ವರ್ಷದ ಯುವಕ ಬಲಿಪಶುವಾಗಿದ್ದಾನೆ. 19 ವರ್ಷದ ಆರೋಪಿಯನ್ನ ವಶಕ್ಕೆ ಪಡೆಯಲಾಗಿದ್ದು 304 ಎ ಎಪಿಸಿ ಸೆಕ್ಷನ್​ ಅಡಿಯಲ್ಲಿ ಓಶಿವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...