
ಅಬುಧಾಬಿ: ಪಾಕಿಸ್ತಾನದ ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಭಾರತ ಪ್ಲಾನ್ ಮಾಡಿದೆ ಎಂದು ಯುಎಇನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವರು ಹೇಳಿದ್ದಾರೆ.
ಪಾಕಿಸ್ತಾನ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸುವ ಕುರಿತಾಗಿ ಪಾಕಿಸ್ತಾನ ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮದ್ ಖುರೇಷಿ ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಮತ್ತೆ ಸರ್ಜಿಕಲ್ ಸ್ಟ್ರೈಕ್ ನಡೆಯುವ ಭಯವಿದೆ ಎಂದು ಅವರು ಹೇಳಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಯುಎಇಗೆ ಬಂದಿದ್ದ ಖುರೇಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಈ ರೀತಿ ಗಂಭೀರ ಆರೋಪ ಮಾಡಿದ್ದಾರೆ.