alex Certify 10 – 12 ನೇ ತರಗತಿ ಪಾಸಾದವರಿಗೆ ಬಂಪರ್; ಪೋಸ್ಟ್ ಆಫೀಸ್ ನ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 – 12 ನೇ ತರಗತಿ ಪಾಸಾದವರಿಗೆ ಬಂಪರ್; ಪೋಸ್ಟ್ ಆಫೀಸ್ ನ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಉದ್ಯೋಗದ ಹುಡುಕಾಟ ನಡೆಸುತ್ತಿರುವ 10, 12ನೇ ತರಗತಿ ಪಾಸಾದವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಅಂಚೆ ಇಲಾಖೆಯು 98,083 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಪೈಕಿ 59,099 ಪೋಸ್ಟ್ ಮ್ಯಾನ್ ಹುದ್ದೆಗಳು,1,445 ಪುರುಷ ಗಾರ್ಡ್ ಹುದ್ದೆಗಳಾಗಿದ್ದು, ಉಳಿದ ಹುದ್ದೆಗಳು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿಯದ್ದಾಗಿದೆ.

10, 12ನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವೇತನ 33,718 – 35,370 ರೂಪಾಯಿಗಳಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ನೂರು ರೂಪಾಯಿಗಳಾಗಿದ್ದು, ಮಹಿಳೆಯರು, ಎಸ್ಸಿ ಎಸ್ಟಿ, ಮಂಗಳಮುಖಿಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ವೆಬ್ಸೈಟ್ www.indiapost.gov.in ಗೆ ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...