
ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು 24 ಗಂಟೆಯಲ್ಲಿ 13 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,903 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 81,687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,862 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,25,055 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 12,28,291 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,45,99,906 ಡೋಸ್ ಲಸಿಕೆ ಹಾಕಲಾಗಿದೆ.