alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಮಳೆ ಆರ್ಭಟದ ನಡುವೆಯೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,086 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಸೋಂಕಿತರ ಸಂಖ್ಯೆ ಕುಸಿತ ಕಂಡಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 19 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,242 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,13,864 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12,456 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,91,933 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,44,805 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,09,87,178 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,51,312 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...