
ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,223ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,13,864 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,958 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,79,477 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,78,383 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,98,21,197 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,32,978 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.