alex Certify BIG BREAKING: ಒಂದೇ ದಿನದಲ್ಲಿ ಮತ್ತೆ 16,000 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 16,000 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 16,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,223ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,13,864 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,958 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,79,477 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,78,383 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,98,21,197 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,32,978 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) July 4, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...