ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 26,964 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
34,167 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 383 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ 3,01,989 ಸಕ್ರಿಯ ಪ್ರಕರಣಗಳಿದ್ದು, ಇದು ಕಳೆದ 186 ದಿನಗಳಲ್ಲಿ ಕಡಿಮೆ ಸಂಖ್ಯೆಯಾಗಿದೆ.
ದೇಶದಲ್ಲಿ ಇದುವರೆಗೆ ಒಟ್ಟು 3,27,83,741 ಮಂದಿ ಚೇತರಿಸಿಕೊಂಡಿದ್ದಾರೆ. 4,46,768 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ ನೀಡಲಾದ ಕೋವಿಡ್ -19 ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ 82 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.