ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಅಲ್ಲದೇ ಕಳೆದ 24 ಗಂಟೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ 5,30,586 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಸಾವುಗಳ ಸಂಖ್ಯೆ ಏರಿಕೆಯಾಗಲು ಕೇರಳದ ಹಳೆ ಡೇಟಾ ಸೇರ್ಪಡೆಯಾಗಿರುವುದು ಕಾರಣವೆನ್ನಲಾಗಿದೆ. ಇದನ್ನು ಹೊರತುಪಡಿಸಿದರೆ ರಾಜಸ್ಥಾನದಲ್ಲಿ ಒಂದು ಸಾವಿನ ಪ್ರಕರಣ ವರದಿಯಾಗಿದೆ.
ದೇಶದಲ್ಲಿ 6,402 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,32,433 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 9,189 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,86,38,566 ಡೋಸ್ ಲಸಿಕೆ ಹಾಕಲಾಗಿದೆ.