alex Certify BIG NEWS: ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 2 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,630 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 4,434 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,38,554 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,276 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,94,37,816 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...