ನವದೆಹಲಿ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ವಿಷಯ ಪ್ರಸ್ತಾಪಿಸಿ ಪಾಕಿಸ್ತಾನ ಟೀಕೆ, ಆರೋಪ ಮಾಡಿರುವುದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.
ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಪದೇ ಪದೇ ಟೀಕೆ ಮಾಡುತ್ತಿದೆ. ಪ್ರಚೋದನಕಾರಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ.
ಪಾಕಿಸ್ತಾನದ ನಡೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿಗಳು ನಡೆಯುತ್ತಿವೆ. ಅಲ್ಪಸಂಖ್ಯಾತ ಯುವತಿಯರಿಗೆ ಬಲವಂತವಾಗಿ ಮದುವೆ ಮಾಡಲಾಗುತ್ತಿದೆ. ಮತಾಂತರ ಮಾಡುವ ಮೂಲಕ ಯುವತಿಯರನ್ನು ಬಲವಂತವಾಗಿ ಮದುವೆ ಮಾಡಿಸುತ್ತಿದ್ದಾರೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ಯಾವುದೇ ರಕ್ಷಣೆ ಇಲ್ಲವಾಗಿದೆ ಎಂದು ಭಾರತ ಟೀಕಿಸಿದೆ.
ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಕೆಲಸವನ್ನು ಪಾಕಿಸ್ತಾನ ಮಾಡಲಿ. ಭಾರತದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿ ಪಿ. ಹರೀಶ್ ಹೇಳಿದ್ದಾರೆ.