ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಜ್ ಟೌನ್ ಕೆನಿಂಗ್ ಸ್ಟನ್ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಮುಖಿಯಾಗಿವೆ.
ಟಾಸ್ ಗೆದ್ದ ಟೀಂ ಇಂಡಿಯ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಟೂರ್ನಿಯಲ್ಲಿ ಸತತ ಏಳು ಪಂದ್ಯಗಳಲ್ಲಿ ಜಯಗಳಿಸಿದ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ 23 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 34 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 9, ರಿಷಬ್ ಪಂತ್ 0, ಸೂರ್ಯಕುಮಾರ್ ಯಾದವ್ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
ವಿರಾಟ್ ಕೊಹ್ಲಿ 40, ಅಕ್ಷರ ಪಟೇಲ್ 30 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದ್ದಾರೆ. ದಕ್ಷಿಣ ಆಫ್ರಿಕಾ ಪರವಾಗಿ ಕೇಶವ ಮಹಾರಾಜ 2, ಕಗಿಸೊ ರಬಾಡ 1 ವಿಕೆಟ್ ಪಡೆದಿದ್ದಾರೆ. ಇತ್ತೀಚಿನ ವರದಿ ಬಂದಾಗ ಭಾರತ 11.3 ಓವರ್ ಗಳಲ್ಲಿ ಮೂರು ವಿಕೆಟ್ ಗೆ 84 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.