ನವದೆಹಲಿ : ಓಮಿಕ್ರಾನ್ ಆತಂಕದ ನಡುವೆಯೇ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದೆ. ಇದೇ ಡಿ. 26ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಬಿಸಿಸಿಐ, ಭಾರತ ತಂಡ ಪ್ರಕಟಿಸಿದೆ.
ಮೊದಲ ಟೆಸ್ಟ್ ಪಂದ್ಯ ಡಿ. 26ರಿಂದ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯ ಜ. 3ರಿಂದ ನಡೆಯಲಿದೆ. ಮೂರನೇ ಟೆಸ್ಟ್ ಫೆ. 11ರಿಂದ ಆರಂಭವಾಗಲಿದೆ. ಆ ನಂತರ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಟೆಸ್ಟ್ ಪಂದ್ಯಕ್ಕಾಗಿ ಸದ್ಯ ಟೀಂನ್ನು ಪ್ರಕಟಿಸಲಾಗಿದೆ.
ಈ ಬಾರಿ ರೋಹಿತ್ ಶರ್ಮಾಗೆ ಉಪನಾಯಕನ ಪಟ್ಟ ನೀಡಲಾಗಿದೆ. ಹಲವು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅಕ್ಸರ್ ಪಟೇಲ್ ಹಾಗೂ ಶುಭಮನ್ ಗಿಲ್ ಗಾಯದ ಸಮಸ್ಯೆಯಿಂದ ಹೊರಗೆ ಉಳಿದಿದ್ದಾರೆ. ಕಳಪೆ ಫಾರ್ಮ್ ನಲ್ಲಿದ್ದರೂ ಇಶಾಂತ್ ಶರ್ಮಾ ಹಾಗೂ ಅಜಿಂಕ್ಯ ರಹಾನೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.
ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಪ್ರವಾಸದ ಪಟ್ಟಿಯಲ್ಲಿದ್ದಾರೆ.