ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪದಿಂದ ಅಪಾರ ಸಾವು-ನೋವು ಸಂಭವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಆಫ್ಘಾನಿಸ್ತಾನಕ್ಕೆ ಅಗತ್ಯ ನೆರವು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಆಫ್ಘಾನಿಸ್ತಾನದ ಜನರ ಜೊತೆ ಭಾರತ ನಿಲ್ಲಲಿದೆ ಎಂದು ಅವರು ಹೇಳಿದ್ದು, ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಭಾರತ ನಿಮ್ಮ ಬೆಂಬಲಕ್ಕೆ ನಿಂತಿದೆ ಎಂದು ಅಫ್ಘಾನಿಸ್ತಾನಕ್ಕೆ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಅಫ್ಘಾನಿಸ್ತಾನ ಭೂಕಂಪದಲ್ಲಿ ಸತ್ತವರ ಸಂಖ್ಯೆ 1000 ಕ್ಕೆ ಏರಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.
ನಿರ್ಬಂಧಗಳಿಂದಾಗಿ ಅಫ್ಘಾನಿಸ್ತಾನ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಕಾರಣ ಭೂಕಂಪದ ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಾಲಿಬಾನ್ ವಿಶ್ವ ಸಮುದಾಯಕ್ಕೆ ಮನವಿ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿ ಹಾನಿ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಸಾಧ್ಯವಾದಷ್ಟು ಬೇಗ ಎಲ್ಲಾ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಒದಗಿಸಲು ಭಾರತ ಸಿದ್ಧವಾಗಿದೆ. ಭಾರತವು ಅಫ್ಘಾನಿಸ್ತಾನದ ಜನರ ಪರವಾಗಿ ನಿಂತಿದೆ ಎಂದು ಹೇಳಿದ್ದಾರೆ.