ಸ್ವಾಯತ್ತ ಫ್ಲೈ ಇಂದ ವಿಂಗ್ ಟೆಕ್ನಾಲಜಿ ವಿಮಾನ ಯಶಸ್ವಿ ಹಾರಾಟ ನಡೆಸಲಾಗಿದೆ. ಚಿತ್ರದುರ್ಗದ ಡಿ.ಆರ್.ಡಿ.ಓ.ದಲ್ಲಿ ಚಾಲಕರಹಿತ ವಿಮಾನ ಹಾರಾಟ ಯಶಸ್ವಿಯಾಗಿ ನಡೆಸಲಾಗಿದೆ.
ಏರೋನಾಟಿಕಲ್ ಟೆಸ್ಟ್ ರೇಂಜ್ ನಲ್ಲಿ ಚೊಚ್ಚಲ ಹಾರಾಟ ಯಶಸ್ವಿಯಾಗಿ ನಡೆದಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಅಭಿನಂದಿಸಿದ್ದಾರೆ. ಡಿ.ಆರ್.ಡಿ.ಓ. ಸ್ವಾಯತ್ತ ವಿಮಾನಗಳ ಪ್ರಮುಖ ಸಾಧನೆ ಇದಾಗಿದೆ. ಆತ್ಮ ನಿರ್ಭರ ಭಾರತಕ್ಕೆ ದಾರಿ ಇದು ಎಂದು ಹೇಳಿದ್ದಾರೆ.
ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ ಮೆಂಟ್ ಆರ್ಗನೈಸೇಶನ್(ಡಿಆರ್‌ಡಿಒ) ಶುಕ್ರವಾರ ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ ನಿಂದ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಹಾರಾಟವನ್ನು ಯಶಸ್ವಿಯಾಗಿ ನಡೆಸಿತು.
ಡಿಆರ್‌ಡಿಒ ಅಧಿಕಾರಿಗಳು, ಮಾನವರಹಿತ ಯುದ್ಧ ವಿಮಾನವನ್ನು ಅಭಿವೃದ್ಧಿಪಡಿಸುವ ಪ್ರಮುಖ ಯಶಸ್ಸಿನಲ್ಲಿ, ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ವಿಮಾನದ ಮೊದಲ ಹಾರಾಟವನ್ನು ಇಂದು ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಯಶಸ್ವಿಯಾಗಿ ನಡೆಸಲಾಯಿತು ಎಂದು ಹೇಳಿದ್ದಾರೆ.
ಸಂಪೂರ್ಣ ಸ್ವಾಯತ್ತ ಮೋಡ್ ನಲ್ಲಿ ಕಾರ್ಯನಿರ್ವಹಿಸುವ ವಿಮಾನವು ಟೇಕ್-ಆಫ್, ವೇ ಪಾಯಿಂಟ್ ನ್ಯಾವಿಗೇಷನ್ ಮತ್ತು ಸುಗಮ ಟಚ್ ಡೌನ್ ಸೇರಿದಂತೆ ಪರಿಪೂರ್ಣ ಹಾರಾಟವನ್ನು ಪ್ರದರ್ಶಿಸಿದೆ. ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವುದು, ಅಂತಹ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಲಾಗಿದೆ.
ಮಾನವರಹಿತ ವೈಮಾನಿಕ ವಾಹನ(UAV)ವನ್ನು ಡಿ.ಆರ್.ಡಿ.ಒ.ದ ಪ್ರಮುಖ ಸಂಶೋಧನಾ ಪ್ರಯೋಗಾಲಯವಾದ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್(ಎಡಿಇ) ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ. ಇದು ಸಣ್ಣ ಟರ್ಬೋಫ್ಯಾನ್ ಎಂಜಿನ್‌ನಿಂದ ಚಾಲಿತವಾಗಿದೆ. ವಿಮಾನಕ್ಕೆ ಬಳಸಲಾದ ಏರ್‌ಫ್ರೇಮ್, ಅಂಡರ್ ಕ್ಯಾರೇಜ್, ಸಂಪೂರ್ಣ ಹಾರಾಟದ ನಿಯಂತ್ರಣ ಮತ್ತು ಏವಿಯಾನಿಕ್ಸ್ ವ್ಯವಸ್ಥೆಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ.