BIG NEWS:‌ 2075 ರ ವೇಳೆಗೆ ಆರ್ಥಿಕತೆಯಲ್ಲಿ ಅಮೆರಿಕವನ್ನೂ ಹಿಂದಿಕ್ಕಲಿದೆ ‘ಭಾರತ’

ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಒಂದು ದಿನ ಭಾರತ ಕೂಡ ಸೂಪರ್ ಪವರ್ ದೇಶ ಆಗುತ್ತದೆ ಅಂತಾ ಭಾರತೀಯರೆಲ್ಲರೂ ಚಾತಕಪಕ್ಷಿಗಳಂತೆ ಕಾದು ಕೂತಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುತ್ತದೆಯಂತೆ. ಅಮೆರಿಕವನ್ನು ಹಿಂದಿಕ್ಕಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ವರದಿಯೊಂದು ತಿಳಿಸಿದೆ.

ಹೌದು, ಭಾರತವು 2075 ರ ವೇಳೆಗೆ ಜಪಾನ್, ಜರ್ಮನಿ ಮತ್ತು ಅಮೆರಿಕಾವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೂಡಿಕೆ ಬ್ಯಾಂಕ್ ಗೋಲ್ಡ್ಮನ್ ಸ್ಯಾಚ್ಸ್ ವರದಿಯಲ್ಲಿ ತಿಳಿಸಿದೆ. ಭಾರತವು ಪ್ರಸ್ತುತ ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ.

ಜನಸಂಖ್ಯಾಶಾಸ್ತ್ರ, ನಾವೀನ್ಯತೆ ಮತ್ತು ತಂತ್ರಜ್ಞಾನ, ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಹೆಚ್ಚುತ್ತಿರುವ ಕಾರ್ಮಿಕರ ಉತ್ಪಾದಕತೆ ಸೇರಿ ಈ ಅನೇಕ ಬೆಳವಣಿಗೆಗಳು ಆರ್ಥಿಕತೆಗೆ ಕಾರಣವಾಗಲಿದೆ. ಮುಂದಿನ ಎರಡು ದಶಕಗಳಲ್ಲಿ, ಭಾರತದ ಅವಲಂಬನೆ ಅನುಪಾತವು ಪ್ರಾದೇಶಿಕ ಆರ್ಥಿಕತೆಗಳಲ್ಲಿ ಅತ್ಯಂತ ಕಡಿಮೆ ಇರುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಸರ್ಕಾರವು ಮೂಲಭೂತ ಸೌಕರ್ಯಗಳ ಸೃಷ್ಟಿಗೆ ಆದ್ಯತೆ ನೀಡಿದೆ. ವಿಶೇಷವಾಗಿ ರಸ್ತೆಗಳು ಮತ್ತು ರೈಲುಮಾರ್ಗಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕಾರ್ಮಿಕ ಬಲದ ಪ್ರಮಾಣವು ಹೆಚ್ಚಾಗದಿದ್ದರೆ ಭಾರತದ ಆರ್ಥಿಕ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಕಳೆದ 15 ವರ್ಷಗಳಲ್ಲಿ ಭಾರತದಲ್ಲಿ ಕಾರ್ಮಿಕರ ಸಂಖ್ಯೆಯಲ್ಲಿ ಕುಸಿತ ಕಂಡಿದೆ ಎಂದು ಅಧ್ಯಯನದಲ್ಲಿ ಕಂಡುಬಂದಿದೆ. ಅದರಲ್ಲೂ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣವು ಪುರುಷರಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read