
ಭಾರತ-ಇಂಗ್ಲೆಂಡ್ ಟಿ ಟ್ವೆಂಟಿ ಸರಣಿಯಲ್ಲಿ ಮಹಿಳಾ ಇಂಗ್ಲೆಂಡ್ ತಂಡ 2-0 ಮುನ್ನಡೆ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ. ಅಂತಿಮ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಂಗ್ಲೆಂಡ್ ನ ವನಿತೆಯರು ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಕಳಪೆ ಪ್ರದರ್ಶನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಟೀಕೆಗಳು ವ್ಯಕ್ತವಾಗಿದ್ದು, ತನ್ನ ಕೊನೆಯ ಪಂದ್ಯದಲ್ಲಾದರೂ ಜಯಭೇರಿಯಾಗಲಿದೆಯಾ ಕಾದುನೋಡಬೇಕಾಗಿದೆ. ಇದಾದ ಬಳಿಕ ಭಾರತ ಹಾಗೂ ಇಂಗ್ಲೆಂಡ್ ನಡುವೆ ಒಂದು ಟೆಸ್ಟ್ ಪಂದ್ಯ ನಡೆಯಲಿದೆ.