
ದುಬೈ: ಚಾಂಪಿಯನ್ಸ್ ಟ್ರೋಫಿ ಎ ಗುಂಪಿನ ಎರಡನೇ ಪಂದ್ಯದಲ್ಲಿ ಇಂದು ಪಾರಂಪರಿಕ ಎದುರಾಳಿಗಳಾದ ಪಾಕಿಸ್ತಾನ, ಭಾರತ ಮುಖಾಮುಖಿಯಾಗಿವೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿದೆ. ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ.
ಮೊಹಮ್ಮದ್ ರಿಜ್ವಾನ್ ನೇತೃತ್ವದ ಪಾಕಿಸ್ತಾನ ಟೂರ್ನಿಯಿಂದ ಹೊರಗೊಳಿಯುವುದನ್ನು ತಪ್ಪಿಸಿಕೊಳ್ಳಲು ಒತ್ತಡದಲ್ಲಿ ಕಣಕ್ಕಿಳಿದಿದೆ. ಈಗಾಗಲೇ ಬಾಂಗ್ಲಾ ವಿರುದ್ಧದ ಮೊದ ಪಂದ್ಯದ ಗೆಲುವಿನಿಂದ ಭಾರತದ ಆಟಗಾರರ ಆತ್ಮವಿಶ್ವಾಸ ಹೆಚ್ಚಾಗಿದೆ.
ಪಾಕಿಸ್ತಾನ ಎದುರಿನ ಹಿಂದಿನ ಆರು ಪಂದ್ಯಗಳಲ್ಲಿ ಐದರಲ್ಲಿ ಭಾರತ ಜಯ ಗಳಿಸಿದ್ದು, ಇಂದಿನ ಪಂದ್ಯವನ್ನು ಕೂಡ ಗೆಲ್ಲುವ ವಿಶ್ವಾಸದಲ್ಲಿದೆ. 2017ರ ಚಾಂಪಿಯನ್ ಟ್ರೋಫಿ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಫಕರ್ ಜಮಾನ್ ಬದಲಿಗೆ ಹಿಮಾಮುಲ್ ಹಕ್ ಕಣಕ್ಕಿಳಿಯಲಿದ್ದಾರೆ.
#INDvsPAK | Pakistan skipper Md Rizwan wins toss, elects to bat first against India.#ICCChampionsTrophy pic.twitter.com/ku6HVuhECb
— ANI (@ANI) February 23, 2025