ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಮುಂದಿನ ವರ್ಷ ನಡೆಯಲಿದೆ. ಮೊದಲ ಪಂದ್ಯದಲ್ಲಿಯೇ ಭಾರತ ತಂಡ, ಪಾಕಿಸ್ತಾನ ತಂಡದ ವಿರುದ್ಧ ಸೆಣೆಸಾಡಲಿದೆ. ಮಾರ್ಚ್ 6 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಮೊದಲ ಪಂದ್ಯ ನಡೆಯಲಿದೆ.
ಐಸಿಸಿ ಮಹಿಳಾ ವಿಶ್ವಕಪ್ 2022 ರೌಂಡ್ ರಾಬಿನ್ ಮಾದರಿಯಲ್ಲಿ ಆಡಲಾಗುವುದು. ಎಲ್ಲಾ 8 ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.
ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 30 ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ. ಎರಡನೇ ಸೆಮಿಫೈನಲ್ ಪಂದ್ಯವು ಮಾರ್ಚ್ 31 ರಂದು ಹ್ಯಾಗ್ಲಿ ಓವಲ್‌ನಲ್ಲಿ ನಡೆಯಲಿದೆ. ಐಸಿಸಿ ಮಹಿಳಾ ವಿಶ್ವಕಪ್ 2022 ಫೈನಲ್ ಹಣಾಹಣಿ ಏಪ್ರಿಲ್ 3 ರಂದು ನಡೆಯಲಿದೆ.
2022ರ ಮಹಿಳಾ ವಿಶ್ವಕಪ್‌ನಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ನಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಆಕ್ಲೆಂಡ್, ಕ್ರೈಸ್ಟ್ಚರ್ಚ್, ಡ್ಯುನೆಡಿನ್, ಹ್ಯಾಮಿಲ್ಟನ್, ಟೌರಂಗಾ ಮತ್ತು ವೆಲ್ಲಿಂಗ್ಟನ್ ನಲ್ಲಿ ನಡೆಯಲಿದೆ.
ಮಾರ್ಚ್ 6 ರಂದು ಭಾರತ, ಪಾಕಿಸ್ತಾನದ ವಿರುದ್ಧ ಆಡಲಿದೆ. ಮಾರ್ಚ್ 10 ರಂದು ನ್ಯೂಜಿಲೆಂಡ್ ವಿರುದ್ಧ, ಮಾರ್ಚ್ 12 ರಂದು ವೆಸ್ಟ್ ಇಂಡೀಸ್ ವಿರುದ್ಧ, ಮಾರ್ಚ್ 16 ರಂದು ಇಂಗ್ಲೆಂಡ್ ವಿರುದ್ಧ ಮತ್ತು ಮಾರ್ಚ್ 19 ರಂದು ಆಸ್ಟ್ರೇಲಿಯಾ ವಿರುದ್ಧ ಪಂದ್ಯ ನಡೆಯಲಿದೆ. ಮಾರ್ಚ್ 22 ರಂದು ಬಾಂಗ್ಲಾದೇಶ ವಿರುದ್ಧ ಹಾಗೂ ಮಾರ್ಚ್ 27 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ನಡೆಯಲಿದೆ.
ಇತ್ತೀಚೆಗೆ ನಡೆದ ಪುರುಷರ ಟಿ20 ವಿಶ್ವಕಪ್‌ನಲ್ಲೂ ಭಾರತ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು ಎದುರಿಸಿತ್ತು. ಮೊದಲ ಪಂದ್ಯದಲ್ಲಿಯೇ ಟೀಂ ಇಂಡಿಯಾವನ್ನು ಪಾಕಿಸ್ತಾನ ಮಣಿಸಿತ್ತು.