ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವ ಬಗ್ಗೆ ಸದ್ಯಕ್ಕೆ ಯಾವುದೇ ಯೋಜನೆ ಹೊಂದಿಲ್ಲ ಎಂದು ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಭಾರತವು ಸಂಪೂರ್ಣ ಕಾಶ್ಮೀರವನ್ನು ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತೀಯ ಟ್ರೂಪ್ಗಳ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೆಸ್ಟರ್ನ್ ಏರ್ ಕಮಾಂಡ್ನ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜನರನ್ನು ಪಾಕಿಸ್ತಾನ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲಾ ಚಟುವಟಿಕೆಗಳ ಮೇಲೆ ಭಾರತೀಯ ವಾಯುಸೇನೆ ಹಾಗೂ ಭೂಸೇನೆ ಕಣ್ಣಿಟ್ಟಿದೆ. ಮುಂದಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರವು ಕಾಶ್ಮೀರಕ್ಕೇ ಸೇರಲಿದೆ ಎಂಬ ನಂಬಿಕೆ ನನಗಿದೆ. ಮುಂದಿನ ವರ್ಷಗಳಲ್ಲಿ ಸಂಪೂರ್ಣ ಕಾಶ್ಮೀರವನ್ನು ಭಾರತದ ಹೊಂದಲಿದೆ ಎಂದು ಅವರು ಹೇಳಿದ್ರು.
ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯುವ ಯಾವುದಾದರೂ ಯೋಜನೆ ಇದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅಮಿತ್ ದೇವ್ ಈ ರೀತಿಯ ಯಾವುದೇ ಯೋಜನೆಗಳು ಸಧ್ಯಕ್ಕಿಲ್ಲ ಎಂದು ಹೇಳಿದರು.
ಇಡೀ ಕಾಶ್ಮೀರ ಒಂದೇ, ರಾಷ್ಟ್ರವೂ ಒಂದೇ. ಎರಡೂ ಕಡೆಯ ಜನರು ಸಮಾನ ಬಾಂಧವ್ಯವನ್ನು ಹೊಂದಿದ್ದಾರೆ. ಇಂದು ಅಥವಾ ನಾಳೆ ಇತಿಹಾಸವು ಸೃಷ್ಟಿಯಾಗಲಿದೆ. ಸದ್ಯ ನಮಗೆ ಇಂತಹ ಯಾವುದೇ ಯೋಜನೆ ಇಲ್ಲ. ಆದರೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜನರನ್ನು ಪಾಕಿಸ್ತಾನದವರು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಹೇಳಿದ್ರು.