ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡೆನ್ ಸಂಪುಟಕ್ಕೆ ಕನ್ನಡಿಗ ವಿವೇಕ್ ಮೂರ್ತಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಮಂಡ್ಯ ಮೂಲದ ಡಾ. ವಿವೇಕ್ ಮೂರ್ತಿ ಆರೋಗ್ಯ ಮತ್ತು ಮಾನವ ಸೇವೆಗಳ ಕಾರ್ಯದರ್ಶಿ ಹುದ್ದೆಗೆ ನೇಮಕವಾಗಬಹುದು ಎಂದು ಹೇಳಲಾಗಿದೆ. ಅದೇ ರೀತಿ ಭಾರತೀಯ ಮೂಲದ ಪ್ರಾಧ್ಯಾಪಕ ಡಾ. ಅರುಣ್ ಮಜುಮದಾರ್ ಅವರನ್ನು ಇಂಧನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಕಟಿಸಲಾಗಿದೆ.
ಅಮೆರಿಕದ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಮಂಡ್ಯ ಮೂಲದ ವಿವೇಕ್ ಮೂರ್ತಿ ಕೋವಿಡ್ ನಿಯಂತ್ರಿಸುವಲ್ಲಿ ಸಲಹೆ ನೀಡುತ್ತಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ರಚಿಸಲಾದ ಸಲಹಾ ಪಡೆಯಲ್ಲಿ ವಿವೇಕ್ ಮೂರ್ತಿ ಕೂಡ ಇದ್ದಾರೆ. ಅವರು ಬರಾಕ್ ಒಬಾಮ ಅವರ ಅವಧಿಯಲ್ಲಿ ಅಮೆರಿಕದ ಸರ್ಜನ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದಾರೆ.