ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಸೋಮವಾರ ಒಂದೇ ದಿನ 7 ಪದಕ ಭಾರತಕ್ಕೆ ಬಂದಿವೆ.
ನಿತೀಶ್ ಕುಮಾರ್ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ ಎಸ್ಎಲ್ 3 ವಿಭಾಗದಲ್ಲಿ ಸ್ವರ್ಣ ಪದಕ ಗಳಿಸಿದ್ದಾರೆ.
ಎಫ್ 64 ವಿಭಾಗದ ಜಾವೆಲಿನ್ ಥ್ರೋ ನಲ್ಲಿ ಸುಮಿತ್ ಅಂತಿಲ್ ಚಿನ್ನದ ಪದಕ ಪಡೆದಿದ್ದಾರೆ.
ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್ ಎಸ್ಎಲ್ 4 ವಿಭಾಗದಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಪಡೆದಿದ್ದಾರೆ.
ಯೋಗೇಶ್ ಕಥುನಿಯಾ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.
ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್.ಯು. 5 ವಿಭಾಗದಲ್ಲಿ ತುಳಸಿಮತಿ ಮುರುಗೇಶನ್ ಬೆಳ್ಳಿ ಪದಕ ಪಡೆದಿದ್ದಾರೆ. ಮನಿಷಾ ರಾಮದಾಸ್ ಕಂಚಿನ ಪದಕ ಗೆದ್ದಿದ್ದಾರೆ.
ಶೀತಲ್ ದೇವಿ, ರಾಕೇಶ್ ಕುಮಾರ್ ಮಿಶ್ರಾ ತಂಡ ಕಾಂಪೌಂಡ್ ಅರ್ಚರಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ ದಾಖಲೆ ಬರೆದಿದೆ.