ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಜೂನ್ 22 ರಂದು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉನ್ನತ ಕಾಂಗ್ರೆಸ್ ನಾಯಕರು ಸಹಿ ಮಾಡಿದ ಹೇಳಿಕೆಯಲ್ಲಿ ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್ ನ ಉಭಯಪಕ್ಷೀಯ ನಾಯಕತ್ವದ ಪರವಾಗಿ, ಜೂನ್ 22ರಂದು ಗುರುವಾರ ಕಾಂಗ್ರೆಸ್ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ನಿಮ್ಮನ್ನು(ಪ್ರಧಾನಿ ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವವಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗೆ ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್ ರಿಪಬ್ಲಿಕನ್ ನಾಯಕ ಮಿಚ್ ಮೆಕ್‌ಕಾನ್ನೆಲ್ ಮತ್ತು ಹೌಸ್ ಡೆಮಾಕ್ರಟಿಕ್ ನಾಯಕ ಹಕೀಮ್ ಜೆಫ್ರೀಸ್ ಸಹಿ ಮಾಡಿದ್ದಾರೆ.
ಜೂನ್ 22 ರಂದು, ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಅಧಿಕೃತ ಭೇಟಿಗಾಗಿ ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ್ದಾರೆ.