alex Certify 10 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 2972 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 2972 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ ಪೂರ್ವ ರೈಲ್ವೇ ನೇಮಕಾತಿ ವಿಭಾಗದಿಂದ 2972 ​​ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ ಸೈಟ್ er.indianrailways.gov.in ಮೂಲಕ ಅರ್ಜಿ ಸಲ್ಲಿಸಬಹುದು. 2972 ACT ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹೌರಾ ವಿಭಾಗ 659, ಸೀಲ್ದಾ ವಿಭಾಗ 297, ಮಾಲ್ಡಾ ವಿಭಾಗ 138, ಅಸನ್ಸೋಲ್ ವಿಭಾಗ 412, ಕಂಚ್ರಪಾರಾ ವರ್ಕ್ ಶಾಪ್ 187, ಲಿಲುವಾ ವರ್ಕ್ ಶಾಪ್ 612, ಜಮಾಲ್ಪುರ್ ವರ್ಕ್ ಶಾಪ್ 667 ಹುದ್ದೆಗಳಿವೆ.

ಅಭ್ಯರ್ಥಿಯು 10 ನೇ ತರಗತಿ ಪರೀಕ್ಷೆಯಲ್ಲಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು. NCVT/ ಅಧಿಸೂಚಿತ ಟ್ರೇಡ್ ನಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿದಾರರ ವಯೋಮಿತಿ 15 ರಿಂದ 24 ವರ್ಷಗಳು.

ಆಸಕ್ತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು. Gen/OBC/EWS ಗೆ 100 ರೂ., SC/ST/PWD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 20.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...