alex Certify ಜವಾಬ್ದಾರಿ ಹೊತ್ತ ನಂತ್ರ ಮೊದಲ ಬಾರಿ ಮಾತನಾಡಿದ ರಾಹುಲ್ ದ್ರಾವಿಡ್-ರೋಹಿತ್ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜವಾಬ್ದಾರಿ ಹೊತ್ತ ನಂತ್ರ ಮೊದಲ ಬಾರಿ ಮಾತನಾಡಿದ ರಾಹುಲ್ ದ್ರಾವಿಡ್-ರೋಹಿತ್ ಶರ್ಮಾ

ಟೀಂ ಇಂಡಿಯಾ ಕೋಚ್ ಜವಾಬ್ದಾರಿ ವಹಿಸಿಕೊಂಡ ನಂತ್ರ ಇದೇ ಮೊದಲ ಬಾರಿ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ನಾಳೆ ಜೈಪುರದಲ್ಲಿ ನಡೆಯಲಿದೆ. ಟೀಂ ಇಂಡಿಯಾದ 16 ಸದಸ್ಯರ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ತಂಡದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ.

ಎದೆಹಾಲು ಗುಲಾಬಿ ಬಣ್ಣದಲ್ಲಿದ್ದುದ್ದನ್ನು ಕಂಡು ಬೆಚ್ಚಿಬಿದ್ದ ಮಹಿಳೆ​..!

ನಾಯಕನಾದ ನಂತರ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದರು. ತಂಡಕ್ಕೆ ಏನು ಅಗತ್ಯವೋ ಅದನ್ನು ಮಾಡುತ್ತೇವೆ. ಆಟಗಾರರಿಗೆ ಮುಕ್ತವಾಗಿ ಆಡಲು ನಾವು ಸ್ವಾತಂತ್ರ್ಯ ನೀಡುತ್ತೇವೆ. ನ್ಯೂಜಿಲ್ಯಾಂಡ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಇಲ್ಲದಿದ್ದರೂ, ಇತರ 10 ಆಟಗಾರರು ಉತ್ತಮವಾಗಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಬೇಸರಗೊಂಡಿದ್ದ ಪುನೀತ್ ಅಭಿಮಾನಿಗಳಿಗಾಗಿ ಮಹತ್ವದ ನಿರ್ಧಾರ ಪ್ರಕಟಿಸಿದ ಫಿಲ್ಮ್ ಚೇಂಬರ್

ಭಾರತದ ನೂತನ ಕೋಚ್ ಆಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾ ಆಟಗಾರರಿಗೆ ಕೆಲಸದ ಹೊರೆಯನ್ನು ನಿರ್ವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ. ಇದು ಇಂದು ಕ್ರಿಕೆಟ್‌ನ ಅವಿಭಾಜ್ಯ ಅಂಗವಾಗಿದೆ. ಆಟಗಾರರು ದೈಹಿಕವಾಗಿ ಮತ್ತು ಮಾನಸಿಕವಾಗಿಯೂ ಸದೃಢರಾಗಿರಬೇಕು. ಆಟಗಾರನು ಯಂತ್ರವಲ್ಲ. ಪ್ರತಿ ಪಂದ್ಯಾವಳಿಗೂ ಫಿಟ್ನೆಸ್ ಕಾಯ್ದುಕೊಳ್ಳಬೇಕಾಗುತ್ತದೆ. ಎರಡು ಸ್ವರೂಪಗಳಿಗೆ ಎರಡು ತಂಡಗಳನ್ನು ಹೊಂದಲು ಸಾಧ್ಯವಿಲ್ಲ. ಆಟಗಾರರು ಪರಿಸರಕ್ಕೆ ಹೊಂದಿಕೊಳ್ಳಬೇಕೆಂದು ರಾಹುಲ್ ಹೇಳಿದ್ದಾರೆ.

ಟೀಂ ಇಂಡಿಯಾದ ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ಬದಲಾವಣೆಯಾಗಿದೆ. ವಿರಾಟ್ ಕೊಹ್ಲಿ ಟಿ 20 ಕ್ರಿಕೆಟ್‌ ನಾಯಕತ್ವ ತೊರೆದಿದ್ದಾರೆ. 2021 ರ ಟಿ 20 ವಿಶ್ವಕಪ್ ನಂತರ ಕೋಚ್ ರವಿಶಾಸ್ತ್ರಿ ಅಧಿಕಾರಾವಧಿಯೂ ಕೊನೆಗೊಂಡಿದೆ. ರೋಹಿತ್ ಶರ್ಮಾ ಭಾರತ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದು, ಭಾರತದ ಲೆಜೆಂಡರಿ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ಹೊತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...