ಏಷ್ಯನ್ ಗೇಮ್ಸ್ 2023ರ 5ನೇ ದಿನದಂದು ಅನುಷ್ ಅಗರ್ವಾಲ್ ಅವರು ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸ್ಸಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರನ್ನು ಒಳಗೊಂಡ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನ ಗೆದ್ದಿದ್ದರು. ಇದೀಗ ಅನುಷ್ ಅಗರ್ವಾಲ್ ಅವರು ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸ್ಸಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.