ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು, ಇದು ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿತ್ತು.
ಇದೀಗ ಭಾರತದ ಮೊದಲ ನೀರೊಳಗಿನ ಮೆಟ್ರೋ ಸಾರ್ವಜನಿಕರ ಸೇವೆಗೆ ಲಭ್ಯವಾಗಿದ್ದು, ಅಂಡರ್ ವಾಟರ್ ಮೆಟ್ರೋದಲ್ಲಿ ಪ್ರಯಾಣಿಕರು ಪ್ರಯಾಣ ಮಾಡಿ ಸಖತ್ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕೋಲ್ಕತಾದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ನ ಹೌರಾ ಮೈದಾನ್ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಗೆ ಒಂದು ನೀರೊಳಗಿನ ರೈಲು ತನ್ನ ಪ್ರಯಾಣವನ್ನು ಪ್ರಾರಂಭಿಸಿದರೆ, ಮತ್ತೊಂದು ಅದೇ ಸಮಯದಲ್ಲಿ ಎಸ್ಪ್ಲನೇಡ್ ನಿಲ್ದಾಣದಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
“ಮೊದಲ ದಿನದ ಮೊದಲ ಅಂಡರ್ ವಾಟರ್ ಮೆಟ್ರೋ” ಅಭಿಯಾನದ ಭಾಗವಾಗಲು ನೂರಾರು ಪ್ರಯಾಣಿಕರು ಮುಂಜಾನೆ ನಿಲ್ದಾಣಗಳಲ್ಲಿ ಜಮಾಯಿಸಿದರು.ಕೋಲ್ಕತಾದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ನ ಹೌರಾ ಮೈದಾನ್ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಗೆ ಒಂದು ನೀರೊಳಗಿನ ರೈಲು ತನ್ನ ಪ್ರಯಾಣವನ್ನು ಪ್ರಾರಂಭಿಸಿದರೆ, ಮತ್ತೊಂದು ಅದೇ ಸಮಯದಲ್ಲಿ ಎಸ್ಪ್ಲನೇಡ್ ನಿಲ್ದಾಣದಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. “ಮೊದಲ ದಿನದ ಮೊದಲ ಅಂಡರ್ ವಾಟರ್ ಮೆಟ್ರೋ” ದಲ್ಲಿ ಸಂಚರಿಸಲು ನೂರಾರು ಪ್ರಯಾಣಿಕರು ಮುಂಜಾನೆ ನಿಲ್ದಾಣಗಳಲ್ಲಿ ಜಮಾಯಿಸಿದರು.