ಟಿ20 ವಿಶ್ವಕಪ್ ಮುಗಿದ ನಂತ್ರ ಟೀಂ ಇಂಡಿಯಾ-ನ್ಯೂಜಿಲೆಂಡ್ ಮಧ್ಯೆ ಟಿ20 ಹಾಗೂ ಟೆಸ್ಟ್ ಸರಣಿ ನಡೆಯಲಿದೆ. ಟೆಸ್ಟ್ ಸರಣಿಗಾಗಿ, ಟೀಂ ಇಂಡಿಯಾ ಪ್ರಕಟವಾಗಿದೆ. ಈ ಬಾರಿ ಟೆಸ್ಟ್ ತಂಡದಲ್ಲಿ ಅನೇಕ ಬದಲಾವಣೆಯಿದೆ. ಮೊದಲ ಟೆಸ್ಟ್ ನ 16 ಆಟಗಾರರ ತಂಡದ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಕೆಲ ಹೊಸ ಆಟಗಾರರಿಗೆ ತಂಡದಲ್ಲಿ ಅವಕಾಶ ಸಿಕ್ಕಿದ್ದು, ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮೊದಲ ಟೆಸ್ಟ್ ಪಂದ್ಯ ಆಡ್ತಿಲ್ಲ. ಇನ್ನೂ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಆಡ್ತಿಲ್ಲ. ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಈ ತಂಡದಲ್ಲಿ ಶ್ರೇಯಸ್ ಅಯ್ಯರ್ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ. ಸೂರ್ಯಕುಮಾರ್ ಯಾದವ್ ತಂಡದಿಂದ ಹೊರ ಬಿದ್ದಿದ್ದಾರೆ.
ಇದೇ ವೇಳೆ ಕೆಲ ಹೊಸ ಆಟಗಾರರಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಬ್ಯಾಟ್ಸ್ ಮನ್ ಕೆ.ಎಸ್. ಭರತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಯಂತ್ ಯಾದವ್‌ಗೆ ಸುದೀರ್ಘ ಸಮಯದ ನಂತರ ಮತ್ತೊಮ್ಮೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅದೇ ಸಮಯದಲ್ಲಿ ಮತ್ತೊಮ್ಮೆ ಶುಭಮನ್ ಗಿಲ್ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ : ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (WK), ಕೆಎಸ್ ಭರತ್ (WK), ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ