ಶಾರ್ಜಾ-ಹೈದರಾಬಾದ್ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ನಂತರ ಬಜೆಟ್ ಕ್ಯಾರಿಯರ್ ಇಂಡಿಗೋದ ಶಾರ್ಜಾ-ಹೈದರಾಬಾದ್ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು.
ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಗುತ್ತಿದೆ. ವಿಮಾನಯಾನ ಸಂಸ್ಥೆಯು ಕರಾಚಿಗೆ ಮತ್ತೊಂದು ವಿಮಾನವನ್ನು ಕಳುಹಿಸಲು ಯೋಜಿಸುತ್ತಿದೆ. 2 ವಾರಗಳಲ್ಲಿ ಕರಾಚಿಯಲ್ಲಿ ಲ್ಯಾಂಡಿಂಗ್ ಮಾಡಿದ ಎರಡನೇ ಭಾರತೀಯ ವಿಮಾನಯಾನ ಸಂಸ್ಥೆ ಇದಾಗಿದೆ.
ಶಾರ್ಜಾ-ಹೈದರಾಬಾದ್ ವಿಮಾನದ ಪೈಲಟ್ ವಿಮಾನದಲ್ಲಿ ತಾಂತ್ರಿಕ ದೋಷವನ್ನು ಗಮನಿಸಿದ ನಂತರ, ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು. ಪ್ರಯಾಣಿಕರನ್ನು ಹೈದರಾಬಾದ್ ಗೆ ಕರೆತರಲು ಹೆಚ್ಚುವರಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ ಎಂದು ಇಂಡಿಗೋ ಏರ್ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.