alex Certify ಕೊರೊನಾ ಲಸಿಕೆ ಹಾಕಿಸಿಕೊಂಡ ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಹಾಕಿಸಿಕೊಂಡ ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ

ಕೊರೊನಾ ಆತಂಕದ  ಮಧ್ಯೆ ಇಂಡಿಗೊ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇಂಡಿಗೊ ಇಂದಿನಿಂದ ವ್ಯಾಕ್ಸಿ ಶುಲ್ಕ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಲಸಿಕೆ ಹಾಕಿಸಿದ ಪ್ರಯಾಣಿಕರಿಗೆ ರಿಯಾಯಿತಿ ಸಿಗಲಿದೆ. ಲಸಿಕೆ ಪಡೆದ ಪ್ರಯಾಣಿಕರಿಗೆ ಟಿಕೆಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ಸಿಗಲಿದೆ.

ಇಂಡಿಗೋ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದೆ. ಲಸಿಕೆಯ ಒಂದು ಡೋಸ್ ತೆಗೆದುಕೊಂಡ ಪ್ರಯಾಣಿಕರಿಗೂ ವ್ಯಾಕ್ಸಿ ಶುಲ್ಕದ ಲಾಭ ಲಭ್ಯವಾಗಲಿದೆ. ಲಸಿಕೆ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಸುಳ್ಳು ಹೇಳುವ ಮೂಲಕ ಯಾರಾದರೂ ಈ ಯೋಜನೆಯ ಲಾಭವನ್ನು ಪಡೆದುಕೊಂಡರೆ, ಚೆಕ್-ಇನ್ ಕೌಂಟರ್‌ನಲ್ಲಿ ಸಿಕ್ಕಿಬೀಳುವ ಸಾಧ್ಯತೆಯಿದೆ. ಇಂಡಿಗೊ ವೆಬ್‌ಸೈಟ್‌ನಿಂದ ಟಿಕೆಟ್ ಕಾಯ್ದಿರಿಸುವವರಿಗೆ ಈ ಸೌಲಭ್ಯ ಸಿಗಲಿದೆ.

ಟಿಕೆಟ್ ನ ಮೂಲ ಬೆಲೆಗೆ ಮಾತ್ರ ರಿಯಾಯಿತಿ ಸಿಗಲಿದೆ. ಈ ವಿನಾಯಿತಿ ಸೀಮಿತವಾಗಿದೆ. ಭಾರತದಲ್ಲಿ ನೆಲೆಸಿರುವ ಹಾಗೂ ಇಲ್ಲಿ ಲಸಿಕೆ ಪಡೆದ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ರಿಯಾಯಿತಿ ಸಿಗಲಿದೆ ಎಂದು ಇಂಡಿಗೊ ಹೇಳಿಕೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...