ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಊಟ, ತಿಂಡಿ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಊಟ, ತಿಂಡಿಯ ಮೆನುಗೆ ಓಕೆ ಎಂದಿದ್ದಾರೆ ಎನ್ನಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 250 ಕ್ಯಾಂಟೀನ್ ತೆರೆಯಲು ಚಿಂತನೆ ನಡೆಸಲಾಗಿದೆ. ವಿವಿಧ ಬಗೆಯ ತಿಂಡಿ, ಊಟದ ವ್ಯವಸ್ಥೆ ಮಾಡಲಾಗುವುದು. ವಿಧಾನಸೌಧದಲ್ಲಿಯೂ ಇಂದಿರಾ ಕ್ಯಾಂಟೀನ್ ಓಪನ್ ಮಾಡಲಾಗುವುದು. ಸಚಿವರು, ಶಾಸಕರಿಗೂ ಇಂದಿರಾ ಕ್ಯಾಂಟೀನ್ ನಲ್ಲಿ ತಿಂಡಿ. ಊಟದ ವ್ಯವಸ್ಥೆ ಮಾಡಲಾಗುತ್ತದೆ.
ಮೇ 29 ರಿಂದ ಇಂದಿರಾ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗುವುದು. ತಿಂಡಿ, ಊಟದ ಬೆಲೆ ಏರಿಕೆಗೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ತಿಂಡಿಗೆ 10 ರೂಪಾಯಿ, ಊಟಕ್ಕೆ 20 ರೂಪಾಯಿ ಬೆಲೆ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಲೆ ಏರಿಕೆ ಮಾಡಿ ಗುಣಮಟ್ಟದ ರುಚಿಕರ ಆಹಾರ ನೀಡಲು ಚಿಂತನೆ ನಡೆಸಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗತಿ ಪರಿಶೀಲನೆ ನಡೆಸಿದ್ದು, ಶೀಘ್ರವೇ ದುರಸ್ತಿಗೊಳಿಸಿ ಸಿಎಂ ಮೂಲಕ ಮತ್ತೆ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲಾಗುವುದು.