ಬೆಂಗಳೂರು : ರಾಜ್ಯದಲ್ಲಿ ಶೀಘ್ರದಲ್ಲೇ 188 ಹೆಚ್ಚುವರಿ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಹೆಚ್ಚುವರಿ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.
‘ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರು ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಜಾತ್ಯತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ.ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು’ ಎಂದರು.