ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಏರಿಕೆ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಹಳೆಯ ದರ ಮುಂದುವರೆಸಲಾಗುವುದು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಂದು ಊಟದ ಬೆಲೆ 27 ರೂಪಾಯಿ ನಿಗದಿಪಡಿಸಲಾಗಿದೆ. ನೂತನವಾಗಿ ನಿರ್ಮಾಣವಾಗುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಹೊಸ ದರ ಪಡೆಯಲಾಗುವುದು. ಒಂದು ಊಟದ ಬೆಲೆ ಇಂದಿರಾ ಕ್ಯಾಂಟೀನ್ ನಲ್ಲಿ 60 ರೂಪಾಯಿ ಆಗಲಿದೆ. ಗ್ರಾಹಕರಿಂದ 27 ರೂ. ಸಂಗ್ರಹಿಸಿ, ಸರ್ಕಾರದಿಂದ 33 ರೂ. ನೀಡಲಾಗುವುದು. ನೂತನವಾಗಿ ನಿರ್ಮಾಣವಾಗುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಹೊಸ ದರ ಅನ್ವಯವಾಗಲಿದೆ.
ಬಿಬಿಎಂಪಿ ಹೊರತುಪಡಿಸಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ 188 ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು. ಹೊಸ ಇಂದಿರಾ ಕ್ಯಾಂಟೀನ್ ಗಳಿಗೆ 27 ಕೋಟಿ ರೂ. ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸ್ಥಳೀಯ ತಿಂಡಿ ತಿನಿಸುಗಳನ್ನು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಸಿದ್ಧಪಡಿಸಲಾಗುವುದು ಎಂದು ಸಂಪುಟ ಸಭೆಯ ನಂತರ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.