ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಹೆಸರು ಬದಲಾವಣೆಗೆ ಬಿಜೆಪಿ ಜೀವ ತುಂಬಿದೆ.
ತುರ್ತುಪರಿಸ್ಥಿತಿಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದವರ ಹೆಸರನ್ನು ಯಾವುದೇ ಸರ್ಕಾರಿ ವ್ಯವಸ್ಥೆಗೆ ಇಡುವುದೇ ಈ ದೇಶದ ಪ್ರಜೆಗಳಿಗೆ ಮಾಡುವ ದ್ರೋಹವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಹೆದರಿದ ಸಿದ್ದರಾಮಯ್ಯ ಅವರು ಇಂದಿರಾಗಾಂಧಿ ಮೇಲೆ ಕಪಟ ಅಭಿಮಾನ ತೋರಿಸಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದರು. ನಂತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರದ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ.