ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಆಕರ್ಷಣೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಊಟದ ಮೆನುವಿನಲ್ಲಿ ರಾಗಿ ಮುದ್ದೆ, ಚಪಾತಿ, ಸಾಗು ಪರಿಚಯಿಸಲು ಚಿಂತನೆ ನಡೆಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿತ್ತು. ಐದು ರೂಪಾಯಿಗೆ ಊಟ, ತಿಂಡಿ ಸಿಗುತ್ತಿದ್ದು, ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕಳೆಗುಂದಿ ಆಕರ್ಷಣೆ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್ ಗಳಿಗೆ ಚೈತನ್ಯ ನೀಡಲು ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದೆ.
ಅಧಿಕಾರಿಗಳ ತಂಡ ಸರ್ಕಾರಕ್ಕೆ ಸಲಹೆ ನೀಡಿದ್ದು, ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್, ಆಹಾರದ ಮೆನು ಸೇರಿ ಎಲ್ಲಾ ಮಾಹಿತಿಗಳನ್ನು ನೀಡಬೇಕು ಎಂದು ಸಲಹೆ ನೀಡಲಾಗಿದೆ.