
ಮಂಡ್ಯ: ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ ಸಾಗುವಾಗ ಇಂದಿರಾ ಲಂಕೇಶ್ ಮತ್ತು ಕವಿತಾ ಲಂಕೇಶ್ ಹೆಜ್ಜೆ ಹಾಕಿದ್ದಾರೆ.
2017 ರಲ್ಲಿ ಹತ್ಯೆಗೀಡಾದ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಮತ್ತು ಸಹೋದರಿ ಕವಿತಾ ಲಂಕೇಶ್ ಅವರು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ಅವರೊಂದಿಗೆ ನಡೆದರು.
ಇದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ಗೌರಿ ಸತ್ಯದ ಪರವಾಗಿ ನಿಂತಿದ್ದರು… ಧೈರ್ಯದ ಪರವಾಗಿ ನಿಂತಿದ್ದರು… ಸ್ವಾತಂತ್ರ್ಯದ ಪರವಾಗಿ ನಿಂತಿದ್ದರು… ಭಾರತ್ ಜೋಡೋ ಯಾತ್ರೆ ಅವರ ಧ್ವನಿ. ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ. ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ ಎಂದು ಫೋಟೋ ಪೋಸ್ಟ್ ಮಾಡಿದ್ದಾರೆ.