ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪೊಲೀಸ್ ಅಧಿಕಾರಿ ರಾಜ್ ಕಿಶೋರ್ ಸಿಂಗ್ ಮಹಿಳೆಗೆ ಕೋಲಿನಿಂದ ಹೊಡೆಯುವುದನ್ನು ತೋರಿಸುತ್ತದೆ.ಇಬ್ಬರು ಮಹಿಳೆಯರು ಜಗಳದಲ್ಲಿ ತೊಡಗಿದ್ದ ನಂತರ ಪೊಲೀಸ್ ಅಧಿಕಾರಿ ಮಹಿಳೆಯ ಮೇಲೆ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ಬಿಹಾರದಲ್ಲಿ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದರೆ, ಅಪರಾಧಿಗಳು ರಾಜ್ಯದಲ್ಲಿ ಆರಾಮಾಗಿ ತಿರುಗಾಡುತ್ತಿದ್ದಾರೆ ಎಂದು ಆರೋಪಿಸಿದರು.