
ವಿಜಯಪುರ: ವಾಹನವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ರಸ್ತೆಯಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ.
ಕುರಿಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿಯಾಗಿ ಬಿದ್ದಿದೆ. 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇಂಡಿ ಭಾಗದಲ್ಲಿ ಕುರಿಗಳನ್ನು ಕಡಿದು ಮಾಂಸ ಮಾರಾಟ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕುರಿಗಳ ಕಾಲುಗಳನ್ನು ಕಟ್ಟಿ ಬಾಯಿಗೆ ಪ್ಲಾಸ್ಟಿಕ್ ಟೇಪ್ ಅಂಟಿಸಿ ವಾಹನದಲ್ಲಿ ಮಹಾರಾಷ್ಟ್ರದ ಸತಾರಾದಿಂದ ಇಂಡಿಗೆ ಸಾಗಿಸುತ್ತಿದ್ದರು.
ಆದರೆ ಮಾರ್ಗ ಮಧ್ಯೆಯೇ ವಾಹನ ಪಲ್ಟಿಯಾಗಿ ಕುರಿಗಳು ಸಾವನ್ನಪ್ಪಿವೆ. ಪಲ್ಟಿಯಾದ ವಾಹನದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಕುರಿಗಳನ್ನು ವಧೆ ಮಾಡಲು ಈ ಮಾರಕಾಸ್ರ ಬಳಸುತ್ತಿದ್ದರು ಎನ್ನಲಾಗಿದೆ.
ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.