
ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ.
ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು ರೋಗಿಗಳು ಮತ್ತು ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ. ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಮುಜು ನಗರದ ರಕ್ಷಣಾ ಸಂಸ್ಥೆಯ ಅರಿಯಾಂಟೋ ಈ ಬಗ್ಗೆ ಮಾಹಿತಿ ನೀಡಿದ್ದು, ಆಸ್ಪತ್ರೆ ಕಟ್ಟಡದ ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.