alex Certify BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ.

ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು ರೋಗಿಗಳು ಮತ್ತು ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ. ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಮುಜು ನಗರದ ರಕ್ಷಣಾ ಸಂಸ್ಥೆಯ ಅರಿಯಾಂಟೋ ಈ ಬಗ್ಗೆ ಮಾಹಿತಿ ನೀಡಿದ್ದು, ಆಸ್ಪತ್ರೆ ಕಟ್ಟಡದ ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...