ನದವದೆಹಲಿ : ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಂಬರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
73 ವರ್ಷದ ಮಾಜಿ ಸೇನಾ ಜನರಲ್ ಸುಬಿಯಾಂಟೊ 2024 ರ ಅಕ್ಟೋಬರ್ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಈ ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವ್ಯಾಪಕ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಳೆದ ವರ್ಷ ಜೂನ್ ನಲ್ಲಿ, ಪ್ರಧಾನಿಗೆ ಸುಬಿಯಾಂಟೊ ಅವರಿಂದ ಕರೆ ಬಂದಿತ್ತು, ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. “ನಿಯೋಜಿತ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರಿಂದ ದೂರವಾಣಿ ಕರೆ ಸ್ವೀಕರಿಸಲು ಸಂತೋಷವಾಗಿದೆ. ಅವರ ಮುಂಬರುವ ಅಧ್ಯಕ್ಷ ಸ್ಥಾನಕ್ಕೆ ಯಶಸ್ಸನ್ನು ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.