ಇಂದೋರ್ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೋಟೆಲ್ ಮಾಲೀಕ ಪ್ರದೀಪ್ ರಘುವಂಶಿ ಮೃತಪಟ್ಟವರು.
ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಏಕಾಏಕಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಘುವಂಶಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ.
ವರ್ಕ್ ಔಟ್ ಮಾಡುವ ಮೊದಲು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ವಯಸ್ಸಾದ ವ್ಯಕ್ತಿ ಕೆಲಸ ಮಾಡುವ ಮೊದಲು ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ಇಂದಿನ ದಿನಗಳಲ್ಲಿ ಎಲ್ಲರೂ ಜಿಮ್‌ಗೆ ಹೋಗಲು ಆರಂಭಿಸಿದ್ದಾರೆ. ಆದರೆ ವೈದ್ಯರ ಸಲಹೆ ಇಲ್ಲದೆ ಯಾವುದೇ ಪ್ರೊಟೀನ್ ತೆಗೆದುಕೊಳ್ಳಬಾರದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಮತ್ತು ಅವರು ಪ್ರತಿದಿನ ಜಿಮ್‌ಗೆ ಬರುತ್ತಿದ್ದರು. ಅವರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದಿದೆ ಎಂದು ತರಬೇತುದಾರ ತಿಳಿಸಿದ್ದಾರೆ.
ಜಿಮ್‌ಗೆ ಹೋಗುವ ಮೊದಲು, ಅವರ ಸಾಮರ್ಥ್ಯವನ್ನು ಪರೀಕ್ಷಿಸಬೇಕು. ಬೇರೆಯವರು ಹೋಗುತ್ತಾರೆ ಎಂಬ ಕಾರಣಕ್ಕೆ ಜಿಮ್‌ಗೆ ಹೋಗಬೇಡಿ. ಇಲ್ಲದಿದ್ದರೆ ಅವಘಡಗಳು ಸಂಭವಿಸಬಹುದು ಎಂದು ಅವರು ಹೇಳಿದ್ದಾರೆ.