ಮಧ್ಯಪ್ರದೇಶದ ಇಂದೋರ್ ನಲ್ಲಿ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ 7 ಜನರು ಸಜೀವ ದಹನವಾದ ಘಟನೆ ನಡೆದಿದೆ.
ಇಂದೋರ್ ಸ್ವರ್ಣಬಾಗ್ ಕಾಲೋನಿಯಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸ್ವರ್ಣಬಾಗ್ ಕಾಲೋನಿಯಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 6 ಪುರುಷರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದು ಉನ್ನತ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಶೀಘ್ರದಲ್ಲೇ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಆದರೆ ಅಷ್ಟರಲ್ಲಿ 7 ಜನರು ಸಾವನ್ನಪ್ಪಿದರು. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದೆ. ಪೊಲೀಸ್ ತನಿಖೆ ಮುಂದುವರಿದಿದೆ.