ಇಂದೋರ್: ಸಹೋದರಿಯ ಮದುವೆಗೆ ಒಂದು ದಿನ ಇರುವಾಗ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಚಂದನ್ ನಗರ ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕನನ್ನು ಚಂದನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಪುರ್ ಪ್ರದೇಶದ ನಿವಾಸಿ 22 ವರ್ಷದ ವಿಶಾಲ್ ಚೌಧರಿ ಎಂದು ಗುರುತಿಸಲಾಗಿದೆ.
ಮದುವೆ ತಯಾರಿಯಲ್ಲಿದ್ದ ಕುಟುಂಬಸ್ಥರಿಗೆ ಆಘಾತವುಂಟಾಗಿದೆ. ವಿಶಾಲ್ ಕೋಣೆಯೊಂದರಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ದರು ಉಳಿಸಲ ಸಾಧ್ಯವಾಗಿಲ್ಲ.
ಆದರೆ, ಯುವಕ ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣ ಪತ್ತೆಯಾಗಿಲ್ಲ. ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಆತನ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
ವಿಶಾಲ್ ತನ್ನ ಯಾವುದೇ ಸಮಸ್ಯೆಗಳನ್ನು ಕುಟುಂಬ ಸದಸ್ಯರ ಬಳಿ ಹೇಳಿಕೊಂಡಿಲ್ಲ ಎಂದು ಚಿಕ್ಕಪ್ಪ ಕಮಲ್ ಹೇಳಿದ್ದಾರೆ. ರಾತ್ರಿ ಊಟ ಮುಗಿಸಿ ತನ್ನ ಕೊಠಡಿಯಲ್ಲಿ ಮಲಗಲು ತೆರಳಿದ್ದು, ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.