alex Certify 2 ನೇ ಅಲೆ ಸಮಯದಲ್ಲಿ ಗಂಗಾ ನದಿಯಲ್ಲಿ ಎಸೆಯಲ್ಪಟ್ಟ ಶವಗಳ ಸಂಖ್ಯೆಯ ಬಗ್ಗೆ ಮಾಹಿತಿ ಇಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ನೇ ಅಲೆ ಸಮಯದಲ್ಲಿ ಗಂಗಾ ನದಿಯಲ್ಲಿ ಎಸೆಯಲ್ಪಟ್ಟ ಶವಗಳ ಸಂಖ್ಯೆಯ ಬಗ್ಗೆ ಮಾಹಿತಿ ಇಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ

ಸಾಂಕ್ರಾಮಿಕ ರೋಗದ ಮಾರಣಾಂತಿಕ ಎರಡನೇ ಅಲೆಯ ಸಮಯದಲ್ಲಿ ಗಂಗಾ ನದಿಯಲ್ಲಿ ಎಸೆಯಲ್ಪಟ್ಟ COVID-19 ಸಂತ್ರಸ್ತರ ಶವಗಳ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. TMC ಸಂಸದ ಡೆರೆಕ್ ಒ ಬ್ರಿಯಾನ್ ಗಂಗಾದಲ್ಲಿ ಕೋವಿಡ್ ನಿಂದ ಮೃತಪಟ್ಟ ಶವಗಳನ್ನು ಎಸೆಯಲಾಗಿದೆ ಮಾಹಿತಿ ನೀಡಿ ಎಂದು ಜಲಶಕ್ತಿ ಸಚಿವರನ್ನು ಕೇಳಿದಾಗ ಈ ಉತ್ತರ ಬಂದಿದೆ.

ಅಲ್ದೆ COVID-19 ಪ್ರೋಟೋಕಾಲ್‌ಗಳ ಪ್ರಕಾರ ಇವುಗಳನ್ನು ತೆಗೆದುಹಾಕಲು ಮತ್ತು ವಿಲೇವಾರಿ ಮಾಡಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು TMC ನಾಯಕ ಕೇಳಿದರು. ಆದ್ರೆ ಇದಕ್ಕೆ ಕೇಂದ್ರ ಸರಿಯಾದ ಉತ್ತರ ನೀಡದೆ ಇರುವ ಕಾರಣಕ್ಕೆ ವಿಪಕ್ಷಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೊರೋನಾದ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿರುವ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂಬ ಹೇಳಿಕೆಯ ನಂತರ, ಕೇಂದ್ರದ ವಿರುದ್ಧ ಟೀಕೆಗಳು ಹೆಚ್ಚಾಗಿದ್ದವು. ಆ ಘಟನೆಯ ಒಂದು ತಿಂಗಳ ನಂತರ ನೀಡಿರುವ ಈ ಹೇಳಿಕೆಯು ಪ್ರತಿಪಕ್ಷಗಳಿಂದ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಉಂಟುಮಾಡುವ ನಿರೀಕ್ಷೆಯಿದೆ.

ಕಳೆದ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್‌ನ ಎರಡನೇ ಅಲೆಯಲ್ಲಿ , ಕೋವಿಡ್-19 ರೋಗಿಗಳೆಂದು ಶಂಕಿಸಲಾದ ಹಲವಾರು ದೇಹಗಳು ಗಂಗಾ ನದಿಯಲ್ಲಿ ತೇಲುತ್ತಿದ್ದವು ಎಂದು ಆರೋಪಿಸಿದ್ದ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದು ತೀವ್ರತರವಾದ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇದಕ್ಕೂ ಮೊದಲು, ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ಬಗ್ಗೆ ಉತ್ತರ ಪ್ರದೇಶ ಸರ್ಕಾರದಿಂದ ವಿವರವಾದ ವರದಿಯನ್ನು ಪ್ರತಿಪಕ್ಷಗಳು ಕೇಳಿದ್ದವು.

ಇದರ ಬಗ್ಗೆ ಈ ಹಿಂದೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದರು. ಇದೇ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಯುಪಿ ಸರ್ಕಾರವನ್ನು ಟೀಕಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...