alex Certify ಇನ್ ಫೋಸಿಸ್ ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ ಫೋಸಿಸ್ ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ರಾಯಚೂರು: ಬೆಂಗಳೂರಿನ ಇನ್‌ಫೋಸಿಸ್ ಬಿ.ಪಿ.ಎಮ್. ಸಂಸ್ಥೆಯ ವತಿಯಿಂದ ಮೈಸೂರು, ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳ ಬಿ.ಪಿ.ಓ. ಸಂಸ್ಥೆಯಲ್ಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ವಿಕಲಚೇತನ ಪದವೀಧರ ನಿರುದ್ಯೋಗಿ ಅಭ್ಯರ್ಥಿಗಳಿಂದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ಪದವೀಧರರು ಇತ್ತೀಚೆಗೆ ಪದವಿ ಪಡೆದಿರುವ ಅಥವಾ 2 ವರ್ಷಗಳ ಅನುಭವ ಹೊಂದಿರುವ ಮೂಳೆ ವೈಕಲ್ಯ, ಕುಬ್ಜ ಹಾಗೂ ಆಸಿಡ್ ದಾಳಿಯಿಂದ ಪಾರಾದ ವಿಕಲಚೇತನ ಅಭ್ಯರ್ಥಿಗಳು ಈ ನೇಮಕಾತಿ ಡ್ರೆöÊವ್‌ನಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಉತ್ತಮ ವಿಶ್ಲೇಷಣಾತ್ಮಕ ಮತ್ತು ತಾರ್ಕಿಕ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳು 3 ರಿಂದ 4 ಹಂತದ ಆನ್‌ಲೈನ್ ಪರೀಕ್ಷೆಗಳ ಮೂಲಕ ನೇಮಕಾತಿ ಡ್ರೈವ್‌ನಲ್ಲಿ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986938368, 8073610442 ಗೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...