alex Certify BIG NEWS: ಇನ್ಫೋಸಿಸ್ ಆವರಣದಲ್ಲಿ ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ಫೋಸಿಸ್ ಆವರಣದಲ್ಲಿ ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ ಮಾಹಿತಿ

ಮೈಸೂರು: ಮೈಸೂರು ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.

ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...