alex Certify SHOCKING: ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ, ಕಾರಣ ಗೊತ್ತಾ…?

ಲಖಿಂಪುರ ಖೇರಿ(ಉತ್ತರ ಪ್ರದೇಶ): ಮಹಿಳೆಯೊಬ್ಬಳು ತನ್ನ ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ನಡೆದಿದೆ.

ತನ್ನ ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಲು ಯತ್ನಿಸಿದ ಕಾರಣ ಮಹಿಳೆ ಆತನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾಳೆ.

ಮೂಲಗಳ ಪ್ರಕಾರ ಕಮಲಾಪುರ ನಿವಾಸಿ ಹರಿಶಂಕರ್ ಎಂಬಾತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇದೇ ವೇಳೆ ಮಹಿಳೆಯ ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಲು ಹರಿಶಂಕರ್ ಯತ್ನಿಸಿದ್ದಾನೆ. ಈ ವಿಷಯ ಕೆಲಕಾಲ ಮಹಿಳೆಯ ಗಮನಕ್ಕೆ ಬಂದಿರಲಿಲ್ಲ. ಆದರೆ, ಈ ವಿಷಯ ತಿಳಿದ ಆಕೆ ಆತನೊಂದಿಗೆ ಜಗಳವಾಡಿದ್ದಾಳೆ. ಇವರಿಬ್ಬರ ಜಗಳ ತಾರಕಕ್ಕೇರಿದಾಗ ಸಿಟ್ಟಿಗೆದ್ದ ಮಹಿಳೆ ಯುವಕನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾಳೆ.

ಹರಿಶಂಕರ್ ರಕ್ತಸ್ರಾವದ ಸ್ಥಿತಿಯಲ್ಲಿ ಪೊಲೀಸ್ ಠಾಣೆಗೆ ಬಂದಾಗ ಆತನನ್ನು ಚಿಕಿತ್ಸೆಗಾಗಿ ಮೋತಿಪುರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಆತನ ಸ್ಥಿತಿ ಗಂಭೀರವಾದಾಗ ಲಕ್ನೋಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...