ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ರಾಜಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ನಾವು ಆಂದೋಲನ ನಡೆಸಿದ್ದೇವೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲ. ಮಹಿಳೆಯನ್ನು ಎರಡು ಗಂಟೆಗಳ ಕಾಲ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಯಿತು. ರಾಜ್ಯ ಸರ್ಕಾರ ಇಂತಹ ಘಟನೆಯನ್ನು ತಡೆಯಲು ವಿಫಲವಾಗಿದೆ ಎಂದು ಮಾಜಿ ಸಿಎಂ ಸದಾನಂದ ಗೌಡ ಆರೋಪಿಸಿದರು. ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ! ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.
ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ! ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರ ಘೋಷಣೆಗಳ ನಡುವೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ಬಸ್ ಗಳಲ್ಲಿ ಕರೆದೊಯ್ದರು.
ಬೆಳಗಾವಿಯಲ್ಲಿ ಸಂತ್ರಸ್ತೆಯನ್ನು ಭೇಟಿ ಮಾಡಿದ ಬಿಜೆಪಿ ತಂಡ
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಐವರು ಸದಸ್ಯರ ಸತ್ಯಶೋಧನಾ ಸಮಿತಿ ಶನಿವಾರ ಬೆಳಗಾವಿಗೆ ಭೇಟಿ ನೀಡಿ ಸ್ಥಳೀಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿತು. ಆಸ್ಪತ್ರೆಯಲ್ಲಿ ಸಂತ್ರಸ್ತೆಯನ್ನು ಭೇಟಿ ಮಾಡುವ ಮೊದಲು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡ್ಡಾ ಅವರೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಿಸಿದರು.
ಬಿಜೆಪಿ ಸಮಿತಿಯು ಬೆಳಗಾವಿಯ ಆಸ್ಪತ್ರೆಯಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿ ಘಟನೆ ಬಗ್ಗೆ ಮಾಹಿತಿ ಪಡೆದಿದೆ.
ಸಂಸದೆ ಅಪ್ರಜಿತಾ ಸಾರಂಗಿ, ಸಂಸದೆ ಸುನೀತಾ ದುಗ್ಗಲ್, ಸಂಸದೆ ಲಾಕೆಟ್ ಚಟರ್ಜಿ, ಸಂಸದೆ ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಅವರು ಸತ್ಯಶೋಧನಾ ಸಮಿತಿಯಲ್ಲಿದ್ದಾರೆ. ಸಮಿತಿಯು ಜೆ.ಪಿ ನಡ್ಡಾ ಅವರಿಗೆ ಘಟನೆಯ ಸಂಪೂರ್ಣ ವರದಿ ಸಲ್ಲಿಸಲಿದೆ.
ಡಿ.18ಕ್ಕೆ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ
ಇದರ ನಡುವೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 18 ರಂದು ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮುಂದಿನ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗುವಂತೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿದೆ.
ಹೈಕೋರ್ಟ್ ಆದೇಶದ ನಂತರ, ಬೆಳಗಾವಿ ಪೊಲೀಸ್ ಆಯುಕ್ತರು ಕರ್ತವ್ಯ ಲೋಪಕ್ಕಾಗಿ ಕಾಕತಿ ಸಿಪಿಐ ಅವರನ್ನು ಅಮಾನತುಗೊಳಿಸಿದರು. ಈ ಪ್ರಕರಣದಲ್ಲಿ ಈವರೆಗೆ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 11 ಜನರನ್ನು ಬಂಧಿಸಲಾಗಿದೆ.